ಹಲಗೆಬಳಪವ ಪಿಡಿಯದೊಂದ
ಗ್ಗಳಿಕೆ ಪದವಿಟ್ಟಳುಪದೊಂದ
ಗ್ಗಳಿಕೆ ಪರರೊಡ್ಡವದ ರೀತಿಯ ಕೊಳ್ಳದಗ್ಗಳಿಕೆ|
ಬಳಸಿಬರೆಯಲು ಕಂಠಪತ್ರದ
ವುಲುಹುಗೆಡದಗ್ಗಳಿಕೆಯೆಂಬೀ
ಬಲುಹು ಗದುಗಿನ ವೀರನಾರಾಯಣನ ಕಿಂಕರಗೆ||
ಮುಂಜಾನೆ ವಾಕಿಂಗ್ ಹೋಗುವಾಗ ಸ್ಲೇಟು ನ ಒಂದು ತುಂಡು ಸಿಕ್ಕಿತು.ಒಡನೆ ನೆನಪಿಗೆ ಬಂದುದು ಕುಮಾರ ವ್ಯಾಸನ ಪದ್ಯ .ಹಲಗೆ
ಬಳಪವ ಹಿಡಿಯದೊಂದಗ್ಗಳಿಕೆ .ಸ್ಲೇಟು ಕಡ್ಡಿ ,ಪುಸ್ತಕ ಇಲ್ಲದೆ ಮಹಾ ಕಾವ್ಯ ರಚಿಸಿದ ಆತನನ್ನು ಮೆಚ್ಚಿದೆ.ಅವನ ಹೆಮ್ಮೆ ಸಕಾರಣ
ವಾದುದು. ನಾವು ಚಿಕ್ಕಂದಿನಲ್ಲಿ ಒಯ್ಯುತ್ತಿದ್ದ ಸ್ಲೇಟು ನೆನಪಿಗೆ ಬಂತು. ಮೊದಲ ಎರಡು ತರಗತಿಗಳಲ್ಲಿ ಅದುವೇ ನಮ್ಮ ಬರಹದ
ಅಂಗಣ.ವರ್ಷದ ಕೊನೆಯಲ್ಲಿ ಬಳಪದ ಚೌಕಟ್ಟು ಹೋಗಿ ರೊಟ್ಟಿಯಾಕಾರ ತಳೆಯುತ್ತಿತ್ತು.
ಸ್ಲೇಟು ಇದ್ದಾರೆ ಆಯಿತೆ? ಅದನ್ನು ಒರಸಲು ಬಟ್ಟೆ ನೀರು ಬೇಕು. ಶ್ರೀನಿವಾಸ ಮೂರ್ತಿಯವರ ರಂಗಣ್ಣನ ಕನಸಿನ ದಿನಗಳ ಬೋರ್ಡ್
ಒರಸುವ ಬಟ್ಟೆ ನೆನಪಿಗೆ ಬಂತು. ನಾವು ಹಳೆ ಬಟ್ಟೆಯ ತುಂಡನ್ನು ಬಳಪ ಒರಸಲು ಒಯ್ಯುತ್ತಿದ್ದೆವು.ಹಲವೊಮ್ಮೆ ಅಂಗಿ ಚಡ್ಡಿಗೆ
ಒರಸುತ್ತಿದ್ದೆವು .ಹುಡುಗಿಯರು ಲಂಗದ ಬಟ್ಟೆಗೆ .
ಬಟ್ಟೆ ಒದ್ದೆ ಮಾಡಲು ನೀರು ಬೇಕಲ್ಲ. ತಮ್ಮ ತಮ್ಮ ಲಾಲಾರಸವೆ ದ್ರವ.ಮಳೆಗಾಲದಲ್ಲಿ ಚಾವಣಿಯಿಂದ ಬೀಳುತ್ತಿದ್ದ ನೀರು.ಶಾಲೆಗೆ
ಹೋಗುವ ದಾರಿಯಲ್ಲಿ ನೀರು ಕಡ್ಡಿ ಎಂಬ ಸಣ್ಣ ಸಣ್ಣ ಸಸಿಗಳು ಸಿಗುತ್ತಿದ್ದವು. ಇವುಗಳ ಕಾಂಡದಿಂದ ಶುಧ್ಧವಾದ ನೀರು ಒಸರುತ್ತಿತ್ತು.
ಇವುಗಳನ್ನು ಕಟ್ಟು ಮಾಡಿ ಒಯ್ಯುತ್ತಿದ್ದೆವು. ಉಕ್ತ ಲೇಖನ ,ಕಾಪಿ ತಪ್ಪು ಬರೆದಾಗ ಅಧ್ಯಾಪಕರ ಬೆತ್ತದಿಂದ ಎರಡು ಬಿದ್ದಾಗ
ಬಂದ ಕಣ್ಣೀರೇ ಬಳಪವನ್ನು ಒದ್ದೆ ಮಾಡಿ ಕೊಡುತ್ತಿತ್ತು.
ಬಳಪ ದ ಕಡ್ಡಿ ,ಅಂದರ ತುಂಡುಗಳು ,ಕೆಲವೊಮ್ಮೆ ಕೊಳ್ಳುತ್ತಿದ್ದ ಬಣ್ಣದ ಕಡ್ಡಿಗಳೂ ನೆನಪಾದವು .ಬಳಪ ಚೀಲ ಗಳನ್ನ ಹೆಗಲಿಗೆ
ಹಾಕಿ ಅಕ್ಕನ ಕೈ ಹಿಡಿದು ನಡೆಯುತ್ತಿದ್ದ ದಿನಗಳು.
ಈಗ ಕಾಲ ಒಂದು ಪೂರ್ಣ ಸುತ್ತು ಹಾಕಿದೆ.ಈಗಿನ ಮಕ್ಕಳಿಗೂ ಹಲಗೆ ಬಳಪವ ಹಿಡಿಯದೆ ಕಲಿಯುವ ಅಗ್ಗಳಿಕೆ.ಕಂಪ್ಯೂಟರ್
ಟಚ್ ಸ್ಕ್ರೀನ್ ನಲ್ಲಿಯೇ ಬರೆಯುವ ದಿನಗಳಲ್ಲವೇ ?
ಮೇಲಿನ ಚಿತ್ರಗಳ ಮೂಲಗಳಿಗೆ ಆಭಾರಿ
ಭಟ್ಟರೇ ಈಗ ನೀವೇ ರಂಗಣ್ಣನ ಕನಸಿನ ದಿನಗಳು ಎರಡನೇ ಭಾಗ ಏಕೆ ಬರೆಯಬಾರದು? ನಿಮ್ಮ ಲೇಖನಿಯಲ್ಲಿ ಇದಕ್ಕೆ ಬೇಕಾದ ಸ್ಪೂರ್ತಿ ಹಾಗು ಶ್ಯಲಿ ಇದೆ.
ಪ್ರತ್ಯುತ್ತರಅಳಿಸಿಧನ್ಯವಾದಗಳು.ನಿಮ್ಮ ಸಲಹೆಯನ್ನು ಗಂಭೀರವಾಗಿ ಪರಿಗಣಿಸುತ್ತೇನೆ
ಪ್ರತ್ಯುತ್ತರಅಳಿಸಿಎ ಪಿ ಭಟ್