ಆತ್ಮೀಯ ವಕೀಲ ಮಿತ್ರ ಶ್ರೀ ಭಾಸ್ಕರ ಕೋಡಿ೦ಬಾಳ ಅವರ ಲಲಿತ ಪ್ರಬಂಧ ಗಳ ಸಂಕಲನ '' ಕಣ್ಣಿಗೆ ಕಾಣದ್ದು ಮನಸ್ಸನ್ನು ಕಾಡಿದ್ದು" ಇದೆ ಸೋಮವಾರ 19.8.2024 ಅಪರಾಹ್ನ 2 ಗಂಟೆಗೆ ಪುತ್ತೂರು ವಕೀಲರ ಸಂಘ ದ 'ಪರಾಶರ ಸಭಾ ಭವನ "ದಲ್ಲಿ ನೆರವೇರಲಿದೆ .
ಪಂಜೆ ಮಂಗೇಶ ರಾಯರ ಸಬ್ ಅಸಿಸ್ಟಂಟ್ ನ ಸುಳ್ಳು ಡೈರಿ ಯಿಂದ , ಶ್ರೀನಿವಾಸ ಮೂರ್ತಿ ಯವರ ರಂಗಣ್ಣನ ಕನಸಿನ ದಿನಗಳು ,ಬಿ ಜಿ ಎಲ್ ಸ್ವಾಮಿ ಯವರ ಕೃತಿಗಳಂತೆ ಗಂಭೀರ ವಿಚಾರ ಗಳನ್ನು ಮೃದು ಹಾಸ್ಯ ಲೇಪನ ದೊಡನೆ ಓದುಗರಿಗೆ ಆಪ್ಯಾಯ ಮಾನ ಆಗುವಂತೆ ಇರುವ ಲೇಖನಗಳು ಈ ಕೃತಿಯಲ್ಲಿ ಇವೆ .
ವಕೀಲರು ನ್ಯಾಯಾಧೀಶರಿಂದ ರಚಿತವಾದ ಮೌಲಿಕ ಕೃತಿಗಳು ಅನೇಕ ಇವೆ .ಮಾಸ್ತಿ ವೆಂಕಟೇಶ ಐಯ್ಯಂಗಾರ್ ಅವರ ಆತ್ಮ ಚರಿತ್ರೆ "ಭಾವ " ಮತ್ತು ನವರತ್ನ ರಾಮ ರಾವ್ ಅವರ ಕೆಲವು ನೆನಪುಗಳು ಕೃತಿಯಲ್ಲಿ ತಾವು ನ್ಯಾಯಾಧೀಶ ರಾಗಿ ಕಾರ್ಯ ನಿರ್ವಹಿಸುವಾಗ ನಡೆದ ರೋಚಕ ಕತೆಗಳ ಉಲ್ಲೇಖ ಇದೆ . ಅದೇ ರೀತಿ ಕೆ ಪಿ ಎಸ್ ಮೇನೋನ್ ಅವರ ಆತ್ಮ ಚರಿತ್ರೆ ಮೆನಿ ವರ್ಲ್ಡ್ಸ್ ನಲ್ಲಿ . ಇವುಗಳಲ್ಲಿ ಹೆಚ್ಚಿನವು ಆತ್ಮ ಚರಿತ್ರೆಗಳು . ಪ್ರಾಥ ಸ್ಮರಣೀಯ ಎಚ್ ಆರ್ ಖನ್ನಾ ಅವರ ನೀದರ್ ರೋಸಸ್ ನೋರ್ ಥಾರ್ನ್ಸ್ ,ಎಂ ಸಿ ಛಾಗ್ಲಾ ಅವರ ರೋಸಸ್ ಇನ್ ಡಿಸೆಂಬರ್ ., ಲೈಲಾ ಸೇಥ್ ,ಫಾಲಿ ನಾರಿಮನ್ ,ಹಿದಾಯತುಲ್ಲಾ ,ಕೃಷ್ಣ ಐಯ್ಯರ್ ,ಎಸ ಎಸ ಸೋಧಿ ಮತ್ತು ನಮ್ಮವರೇ ಆದ ಎಚ್ ಹನುಮಂತ ರಾಯ ,ಬಿ ವಿ ಆಚಾರ್ಯ ಮತ್ತು ಯು ಎಲ್ ಭಟ್ ಅವರ ಕೃತಿಗಳು ಸಾಹಿತ್ಯಿಕವಾಗಿಯೂ ಹೆಸರು ಗಳಿಸಿದಂತಹವು . ವಕೀಲರಿಗೆ ತಮ್ಮ ವೃತ್ತಿ ಯಲ್ಲಿ ಜೀವ ಮತ್ತು ಜೀವನದ ಹಲವು ಮುಖ ಮತ್ತು ಮಗ್ಗುಲುಗಳು ಅಯಾಚಿತವಾಗಿ ಗೋಚರವಾಗಿತ್ತವೆ . ಸಾಹಿತ್ಯ ರಚನೆಗೆ ಒಳ್ಳೆಯ ವಸ್ತು ಆಗ ಬಲ್ಲುವು .
ವಸ್ತು ಇದ್ದರೆ ಸಾಲದು . ಅದನ್ನು ಗ್ರಹಿಸುವ ಮನಸ್ಸು ಮತ್ತು ಅಕ್ಷರಕ್ಕೆ ಇಳಿಸುವ ಭಾಷಾ ಜ್ಞಾನ ಕೂಡ ಬೇಕಾಗುತ್ತದೆ ,ಇಂತಹ ಪ್ರತಿಭೆ ಭಾಸ್ಕರ್ ಅವರಲ್ಲಿ ಇದೆ ..ಸೂಕ್ಷ್ಮ ಗ್ರಹಣ ,ಹಾಸ್ಯ ಪ್ರಜ್ಞೆ ಮತ್ತು ವೃತ್ತಿ ಕಾರಣ ನಗರ ವಾಸಿ ಯಾದರೂ ಜತನ ದಿಂದ ಕಾಯ್ದು ಕೊಂಡು ಬಂದ ಮಣ್ಣಿನ ವಾಸನೆ ಇವು ಅವರ ಪ್ರಭಂದ ಗಳಲ್ಲಿ ಎದ್ದು ಕಾಣುವ ಗುಣಗಳು .
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ